ಮದ್ದೂರಿನಲ್ಲಿ ಕಲ್ಲು ತೂರಾಟ ನಡೆಸಿದವರ ಜತೆ ಹಿಂದುತ್ವ ಸಂಘಟನೆಯವರು ಸೇರಿಕೊಂಡಿದ್ದಾರೆ : ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಕಲ್ಲು ತೂರಾಟ ನಡೆಸಿದವರ ಜತೆ ಹಿಂದುತ್ವ ಸಂಘಟನೆಯವರು ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, 'ಘಟನೆಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ತನಿಖೆಗೆ ಒಳಪಡಿಸಿದ್ದಾರೆ. ಅದರಲ್ಲಿ ಯಾರೆಲ್ಲ ಸೇರಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ಗೊತ್ತಿಲ್ಲ. ಹಿಂದುತ್ವ ಸಂಘಟನೆಯವರು ಎಂದು ಪೊಲೀಸರು ಹೇಳುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಸತ್ಯಾಂಶ ಗೊತ್ತಾಗಲಿದೆ' ಎಂದು ತಿಳಿಸಿದರು.
ಶಾಂತಿ ಕಾಪಾಡಲು ಪೊಲೀಸರು ಒಂದು ಹಂತದವರೆಗೆ ಪ್ರಯತ್ನಿಸಿದ್ದಾರೆ. ಸಂಘಟನೆಯವರ ಮನವೊಲಿಸಿದ್ದಾರೆ. ಅವರ ಕೈ ಮೀರಿದಾಗ ಲಾಠಿ ಪ್ರಹಾರ ಮಾಡಿದ್ದಾರೆ. ಈಗಾಗಲೇ ಬಂಧನಕ್ಕೆ ಒಳಗಾದವರು ಕಲ್ಲು ತೂರಾಟ ನಡೆಸಿದ್ದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
Next Story