ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ: ಅರ್ಜಿಗಳ ಆಹ್ವಾನ

ಉಡುಪಿ, ಸೆ.16: ಕಾರ್ಕಳದ ಕಾಬೆಟ್ಟುನಲ್ಲಿರುವ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ)ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಯುವನಿಧಿ ಫಲಾನುಭವಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆ.ಜಿ.ಟಿ.ಟಿ.ಐ, ಕಾರ್ಕಳ ದೂ.ಸಂ: 08258-200451ನ್ನು ಸಂಪರ್ಕಿಸ ಬಹುದು ಎಂದು ಕೆಜಿಟಿಟಿಐ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story