ಬಿಜೆಪಿಯಿಂದ ‘ರಸ್ತೆ ಗುಂಡಿಗಳೊಂದಿಗೆ ಸೆಲ್ಫಿ’ ಅಭಿಯಾನಕ್ಕೆ ಚಾಲನೆ

ಉಡುಪಿ, ಸೆ.16: ರಸ್ತೆಗಳ ಗುಂಡಿಗಳನ್ನು ತಕ್ಷಣ ಮುಚ್ಚಿ ದುರಸ್ತಿಗೊಳಿಸು ವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ ’ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನ’ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ’ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಫೋಟೋ ಹಂಚಿಕೊಳ್ಳುವ ಮೂಲಕ ಚಾಲನೆ ನೀಡಿದರು.
ಕೇವಲ ಸ್ವಯಂ ಘೋಷಿತ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಸ್ತೆಗಳ ಗುಂಡಿ ಮುಚ್ಚಲೂ ಹಣವಿಲ್ಲದೇ ನೈಜ ದಿವಾಳಿತನ ಪ್ರದರ್ಶಿಸಿದೆ. ಉಡುಪಿ ಜಿಲ್ಲೆಯಾದ್ಯಂತ ರಾಜ್ಯ ಸರಕಾರದ ಸುಪರ್ದಿಯಲ್ಲಿರುವ ಎಲ್ಲಾ ರಸ್ತೆಗಳು ಗುಂಡಿಗಳಿಂದ ತುಂಬಿ ತುಳುಕುತ್ತಿದ್ದರೂ ಮುಖ್ಯಮಂತ್ರಿಗಳ ಸಹಿತ ರಾಜ್ಯ ಸರಕಾರ ಈ ಬಗ್ಗೆ ತೀವ್ರ ನಿರ್ಲಕ್ಷ್ಯ ಧೋರಣೆ ಅನುಸರಿಸಿರುವುದು ಖಂಡನೀಯ ಎಂದು ಕುತ್ಯಾರು ತಿಳಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಠಿಯಿಂದ ಸೆ.16ರಂದು ’ರಸ್ತೆ ಗುಂಡಿಗಳ ಜೊತೆ ಸೆಲ್ಫಿ’ ಅಭಿಯಾನವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಈ ಅಭಿಯಾನದಲ್ಲಿ ಭಾಗವಹಿಸಿ, ರಾಜ್ಯ ಸರಕಾರದ ಪರಿಮಿತಿಗೆ ಒಳಪಟ್ಟಿರುವ ರಸ್ತೆಗಳಲ್ಲಿ ರುವ ಗುಂಡಿಗಳ ಜೊತೆಗೆ ಸೆಲ್ಫಿ ಫೋಟೋ ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ನಿದ್ದೆಯ ಮಂಪರಿನಲ್ಲಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕಣ್ಣು ತೆರೆಸಿ ಎಚ್ಚರಿಸುವ ಸತ್ಕಾರ್ಯದಲ್ಲಿ ತೊಡಗಿಸಿ ಕೊಂಡಿರುವುದು ಶ್ಲಾಘನೀಯ.
ರಾಜ್ಯ ಸರಕಾರ ಎಚ್ಚೆತ್ತುಕೊಂಡು ತಕ್ಷಣ ಉಡುಪಿ ಜಿಲ್ಲೆಯಾದ್ಯಂತ ರಾಜ್ಯ ಸರಕಾರದ ಪರಿಮಿತಿಗೆ ಸಂಬಂಧಿಸಿ ರುವ ವಿವಿಧ ರಸ್ತೆಗಳಲ್ಲಿರುವ ಹೊಂಡಗಳನ್ನು ಮುಚ್ಚಲು ತುರ್ತು ಕ್ರಮವನ್ನು ವಹಿಸಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಅಗ್ರಹಿಸಿದ್ದಾರೆ.