Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಸವ ಸಂಸ್ಕೃತಿ ಅಭಿಯಾನ ಸೆ.18ಕ್ಕೆ...

ಬಸವ ಸಂಸ್ಕೃತಿ ಅಭಿಯಾನ ಸೆ.18ಕ್ಕೆ ಉಡುಪಿಗೆ ಆಗಮನ

ವಾರ್ತಾಭಾರತಿವಾರ್ತಾಭಾರತಿ16 Sept 2025 8:14 PM IST
share
ಬಸವ ಸಂಸ್ಕೃತಿ ಅಭಿಯಾನ ಸೆ.18ಕ್ಕೆ ಉಡುಪಿಗೆ ಆಗಮನ
► ವಿದ್ಯಾರ್ಥಿ-ಸಾರ್ವಜನಿಕರೊಂದಿಗೆ ವಚನ ಸಂವಾದ, ಸಮಾವೇಶ ► ಸಾಣೇಹಳ್ಳಿ ಸ್ವಾಮಿಗಳು ಸೇರಿ ಹಲವು ಮಠಾಧೀಶರ ಉಪಸ್ಥಿತಿ

ಉಡುಪಿ, ಸೆ.16: ಶುದ್ಧ ಬಸವತತ್ವವನ್ನು ಪ್ರಚಾರ, ಪ್ರಸಾರ ಹಾಗೂ ಅನುಷ್ಠಾನ ಮಾಡುವ ಆಶಯದೊಂದಿಗೆ ‘ಲಿಂಗಾಯತ ಮಠಾಧಿಪತಿಗಳ ಒಕ್ಕೂಟ’ದ ಚಿಂತನೆಯ ಫಲವಾಗಿ ಸೆ.1ರಿಂದ ಅ.1ರವರೆಗೆ ನಡೆಯುವ ಬಸವ ಸಂಸ್ಕೃತಿ ಅಭಿಯಾನ ಸೆ.18ರಂದು ಉಡುಪಿಗೆ ಆಗಮಿಸಲಿದ್ದು, ವಚನ ಸಂವಾದ, ಸಾಮರಸ್ಯದ ನಡಿಗೆ ಹಾಗೂ ಸಾರ್ವಜನಿಕ ಸಮಾವೇಶದೊಂದಿಗೆ ‘ಜಂಗಮದೆಡೆಗೆ’ ನಾಟಕವನ್ನು ಪ್ರಸ್ತುತ ಪಡಿಸಲಿದೆ ಎಂದು ಉಡುಪಿ ಜಿಲ್ಲಾ ಸ್ವಾಗತ ಸಮಿತಿಯ ಡಾ. ನಿರಂಜನ ಚೋಳಯ್ಯ ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಾಣೇಹಳ್ಳಿ ಶ್ರೀತರಳಬಾಳು ಜಗದ್ಗುರು ಶಾಖಾ ಮಠದ ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಹಲವು ಲಿಂಗಾಯತ ಮಠಗಳ ಮಹಾಸ್ವಾಮಿಗಳು ಭಾಗವಹಿಸಲಿದ್ದಾರೆ ಎಂದರು.

ಸೆ.18ರ ಗುರುವಾರ ಬೆಳಗ್ಗೆ 11ಗಂಟೆಗೆ ಅಜ್ಜರಕಾಡಿನ ಪುರಭವನದಲ್ಲಿ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ವಚನ ಸಂವಾದ ನಡೆಯಲಿದೆ. ಇದರಲ್ಲಿ ಸಾಣೇಹಳ್ಳಿ ಮಠದ ಶ್ರೀಪಂಡಿತಾರಾಧ್ಯ ಶಿವಾ ಚಾರ್ಯ ಸ್ವಾಮಿಗಳೊಂದಿಗೆ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರು, ಡಂಬಳ-ಗದಗ ಶ್ರೀಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹಾಗೂ ಕೂಡಲಸಂಗಮ ಬಸವಧರ್ಮ ಪೀಠದ ಜಗದ್ಗುರು ಡಾ.ಗಂಗಾಮಾತಾಜಿ ಪಾಲ್ಗೊಳ್ಳಲಿದ್ದಾರೆ ಎಂದರು.

ಅಪರಾಹ್ನ 3:30ಕ್ಕೆ ನಗರದ ಸರ್ವಿಸ್ ಬಸ್‌ನಿಲ್ದಾಣದ ಬಳಿ ಇರುವ ಗಂಧಾ ಸ್ಮಾರಕದಿಂದ ಪುರಭವನದವರೆಗೆ ಸಾಮರಸ್ಯ ನಡಿಗೆಯನ್ನು ಆಯೋಜಿಸ ಲಾಗಿದೆ. ಬಳಿಕ ಸಂಜೆ 5:00ಗಂಟೆಗೆ ಪುರಭವನದಲ್ಲಿ ಬಸವ ಸಂಸ್ಕೃತಿ ಅಭಿಯಾನದ ಸಾರ್ವಜನಿಕ ಸಮಾವೇಶ ನಡೆಯಲಿದೆ. ಇದರಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಪ್ರದಾನ ಕಾರ್ಯದರ್ಶಿ ಡಾ.ಎಸ್.ಎಂ. ಜಾಮ್‌ದಾರ್ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಡುಪಿ ಜಂಗಮ ಮಠ ಹಾಗೂ ಚಿತ್ರಕಲಾ ಮಂದಿರದ ನಿರ್ದೇಶಕರಾಗಿರುವ ಡಾ.ನಿರಂಜನ್ ತಿಳಿಸಿದರು.

ಉಡುಪಿ ಶಾಸಕ ಯಶಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀಶಾಂತವೀರ ಮಹಾಸ್ವಾಮಿಗಳು ‘ಲಿಂಗಾಯತ ಧರ್ಮದ ನೀತಿ ಶಾಸ್ತ್ರ’ ಎಂಬ ವಿಷಯದ ಕುರಿತು ಹಾಗೂ ಬೆಂಗಳೂರು ಆಕಾಶವಾಣಿಯ ನಿವೃತ್ತ ಅಧಿಕಾರಿ ಡಾ.ಬಸವರಾಜ ಸಾದರ ‘ಶರಣರ ರಾಜಕೀಯ ಪರಿಕಲ್ಪನೆ’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದರು.

ಸಂಜೆ ಶಿವಸಂಚಾರ ಸಾಣೇಹಳ್ಳಿಯಿಂದ ವಚನ ಗೀತೆಗಳಲ್ಲದೇ, ಶ್ರೀಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ರಚಿಸಿದ ‘ಜಂಗಮದೆಡೆಗೆ’ ನಾಟಕವನ್ನು ಪ್ರಸ್ತುತ ಪಡಿಸಲಾಗುತ್ತದೆ ಎಂದು ಡಾ.ನಿರಂಜನ್ ವಿವರಿಸಿದರು.

ಉಡುಪಿ ಬಸವ ಸಮಿತಿಯ ಅಧ್ಯಕ್ಷ ಗಂಗಾಧರ ಅವರು ಮಾತನಾಡಿ, ಜನರಲ್ಲಿ ಆಳವಾಗಿ ಬೇರೂರಿರುವ ಹೊಸ ದೇನನ್ನೂ ಸ್ವೀಕರಿಸಲು ಬಿಡದ ವೈದಿಕ ಪರಂಪರೆಯ ಬೇರುಗಳನ್ನು ಕಿತ್ತೆಸೆದು, ಬಸವ ಚಿಂತನೆಯ ಸಸಿಗಳನ್ನು ನೆಟ್ಟು ಬೆಳೆಸಲು, ಶುದ್ಧ ಬಸವತತ್ವವನ್ನು ಪ್ರಚಾರ, ಪ್ರಸಾರ ಪಡಿಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ನಾಡಿನಾದ್ಯಂತ ಬಸವ ಸಂಸ್ಕೃತಿ ಅಭಿಯಾನವನ್ನು ಹಮ್ಮಿಕೊಂಡಿದೆ. ಸೆ.1ರಂದು ಬಸವನಬಾಗೇವಾಡಿಯಲ್ಲಿ ಉದ್ಘಾಟನೆಗೊಂಡ ಈ ಅಭಿಯಾನ ಶಿವಮೊಗ್ಗದಿಂದ ಉಡುಪಿಗೆ ಆಗಮಿಸಲಿದ್ದು, ಸೆ.19ರಂದು ಮಂಗಳೂರಿಗೆ ತೆರಳಲಿದೆ. ಕಾರ್ಯಕ್ರಮದಲ್ಲಿ 2000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಿದ್ಧಬಸಯ್ಯ ಚಿಕ್ಕಮಠ, ಸ್ವಾಗತ ಸಮಿತಿಯ ರಾಮನಗೌಡ ಚೌಧರಿ, ಮಹಾದೇವಪ್ಪ ಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X