ಭಟ್ಕಳ: ಸೆ.19ರಂದು ಸೀರತ್ ಅಭಿಯಾನದ ಸಮಾರೋಪ ಸಮಾರಂಭ
ಭಟ್ಕಳ: ಭಟ್ಕಳದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ‘ನ್ಯಾಯದ ಹರಿಕಾರ ಪ್ರವಾದಿ ಮುಹಮ್ಮದ್ ಪೈಗಂಬರ್’ ಸೀರತ್ ಅಭಿಯಾನದ ಸಮಾರೋಪ ಸಮಾರಂಭ ಮತ್ತು ಉತ್ತರ ಕನ್ನಡ ಜಿಲ್ಲಾ ಮಟ್ಟದ ಸೀರತ್ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಸೆ. 19ರಂದು ಸಂಜೆ 5 ಗಂಟೆಗೆ ಆಮಿನಾ ಪ್ಯಾಲೇಸ್‌ನಲ್ಲಿ (ಅನ್ಫಾಲ್ ಸೂಪರ್ ಮಾರ್ಕೆಟ್ ಬಳಿ) ನಡೆಯಲಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಭಟ್ಕಳ ತಹಸಿಲ್ದಾರ ನಾಗೇಂದ್ರ ಕೋಳಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ನಾಮಧಾರಿ ಸಮಾಜ ಗುರುಮಠದ ಅಧ್ಯಕ್ಷ ಅರುಣ್ ಜೆ. ನಾಯ್ಕ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಉತ್ತರಕನ್ನಡ ಜಿಲ್ಲಾ ಅಧ್ಯಕ್ಷೆ ಶಿವಾನಿ ಶಾಂತರಾಂ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಭಾಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮಿ ಹಿಂದ್ ಮಂಗಳೂರು ವಲಯ ಸಂಚಾಲಕ ಜನಾಬ್ ಸಯೀದ್ ಇಸ್ಮಾಯಿಲ್ ನಿರ್ವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಗೌರವ ಉಪಸ್ಥಿತಿಯಾಗಿ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಮಾಜಿ ಶಾಸಕ ಜೆ.ಡಿ. ನಾಯ್ಕ, ಅಂಜುಮನ್ ಮಹಾವಿದ್ಯಾಲಯದ ಪ್ರಾಧ್ಯಾಪಕ, ಸಾಹಿತಿ ಹಾಗೂ ಚಿಂತಕ ಪ್ರೋ. ಆರ್.ಎಸ್. ನಾಯಕ್, ಸದ್ಭಾವನಾ ಮಂಚ್ ಅಧ್ಯಕ್ಷ ಸತೀಶಕುಮಾರ್ ನಾಯ್ಕ, ಭಟ್ಕಳ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ಮಾಜಿ ಜಿಲ್ಲಾಧ್ಯಕ್ಷ (ಕಾರ್ಯನಿರತ ಪತ್ರಕರ್ತ ಸಂಘ) ರಾಧಾಕೃಷ್ಣ ಭಟ್ ಮತ್ತು ಎ.ಐ.ಟಿ.ಯು.ಸಿ ರಾಜ್ಯ ಕಾರ್ಯದರ್ಶಿ ಜಿ.ಎನ್. ರೇವಣಕರ್ ಸೇರಿದಂತೆ ಅನೇಕ ಗಣ್ಯರು ಹಾಜರಾಗಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶ್ರೀಧರ್ ಶೇಟ್ ಶಿರಾಲಿ ಅವರಿಗೆ ಗೌರವ ಸನ್ಮಾನ ಸಲ್ಲಿಸಲಾಗುವುದು.
ಈ ಸಂದರ್ಭದಲ್ಲಿ ಕುಟುಂಬ ಸಮೇತ ಭಾಗವಹಿಸುವಂತೆ ಸಂಘಟಕರು ಆಹ್ವಾನಿಸಿದ್ದು, ಕಾರ್ಯಕ್ರಮದ ನಂತರ ಸೌಹಾರ್ದ ಡಿನ್ನರ್ ವ್ಯವಸ್ಥೆಯಿದ್ದು, ಸಸ್ಯಾಹಾರಕ್ಕಾಗಿ ಪ್ರತ್ಯೇಕ ವ್ಯವಸ್ಥೆಯೂ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸೀರತ್ ಅಭಿಯಾನದ ಸಂಚಾಲಕ ಎಂ.ಆರ್.ಮಾನ್ವಿ 9886455416 ಇವರನ್ನು ಸಂಪರ್ಕಿಸಬಹುದಾಗಿದೆ.