ಭಟ್ಕಳ: ಅರಣ್ಯ ಪ್ರದೇಶದಲ್ಲಿ ಜಾನುವಾರು ಕಳೇಬರ ಪತ್ತೆ ; ಪ್ರಕರಣ ದಾಖಲು

ಭಟ್ಕಳ: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುಗ್ಗುಂ ಕಾಲೋನಿ ಗುಡ್ಡೆ ಪ್ರದೇಶದಲ್ಲಿ (ಬೆಳ್ಳಿ ಫಾರೆಸ್ಟ್, ಸರ್ವೆ ನಂ.74) ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ವಧಿಸಲ್ಪಟ್ಟ ಪ್ರಾಣಿಯ ಎಲುಬು ಹಾಗೂ ಇತರ ಭಾಗಗಳನ್ನು ಬಿಸಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಅರಣ್ಯಾಧಿಕಾರಿಗಳು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಉಪ-ವಲಯ ಅರಣ್ಯಾಧಿಕಾರಿ ಮಾರುತಿ ಗಣಪತಿ ಸೊರಗಾಂವಿ (37) ಅವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆ. 11ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಅಪರಿಚಿತರು ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮ ಪ್ರವೇಶ ಮಾಡಿ ಈ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಕರ್ನಾಟಕ ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣೆ ಕಾಯ್ದೆ-2020 ಹಾಗೂ ಸಂಬಂಧಿತ ಕಾನೂನುಗಳಡಿ ಪ್ರಕರಣವನ್ನು ದಾಖಲಿಸಿರುವ ಭಟ್ಕಳ ನಗರ ಪೊಲೀಸರು, ಪಿಎಸ್‌ಐ ನವೀನ್ ಎಸ್. ನಾಯ್ಕ ಅವರ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದಾರೆ.
Next Story