Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಅರಣ್ಯವಾಸಿಗಳ ಜಾಗೃತಿ ಜಾಥಾ...

ಭಟ್ಕಳ: ಅರಣ್ಯವಾಸಿಗಳ ಜಾಗೃತಿ ಜಾಥಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 Sept 2025 10:15 PM IST
share
ಭಟ್ಕಳ: ಅರಣ್ಯವಾಸಿಗಳ ಜಾಗೃತಿ ಜಾಥಾ ಕಾರ್ಯಕ್ರಮ

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಪುನರ್ ಪರಿಶೀಲಿಸದೇ ರಾಜ್ಯದಲ್ಲಿ ಎರಡು ಲಕ್ಷ ಅರವತ್ತು ಸಾವಿರಕಕ್ಕೂ ಮಿಕ್ಕಿ ಅರ್ಜಿ ತಿರಸ್ಕರಿಸಿದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್‌ ನಲ್ಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ತೀರ್ಮಾನಿಸಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಅವರು ಇಂದು ಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ 34 ವರ್ಷ ಪಾದಾರ್ಪಣೆ ಹಿನ್ನಲೆಯಲ್ಲಿ ವೇದಿಕೆಯ ಕಾರ್ಯಾಲಯ ದಲ್ಲಿ ಜರುಗಿದ ಅರಣ್ಯವಾಸಿಗಳ ಜಾಗೃತಿ ಜಾಥಾ ಕಾರ್ಯಕ್ರಮದ ಚಿಂತನ ಕೂಟದಲ್ಲಿ ತೀರ್ಮಾನಿಸಿದ ನಿರ್ಣಯವನ್ನು ಮೇಲಿನಂತೆ ಪ್ರಕಟಿಸಿದರು.

ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಮಿತಿ ಅಸ್ಥಿತ್ವವಿಲ್ಲದಿ ದ್ದಾಗಲೂ, ಅರ್ಜಿ ವಿಚಾರಣೆ ಮಾಡದೇ ಹಾಗೂ ಅರ್ಜಿಗಳ ಪುನರ್ ಪರಿಶೀಲನೇ ಜರುಗಿಸದೇ, ಅರ್ಜಿ ತಿಸ್ಕರಿಸಿದ ವಿಷಯವನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಿದ ಹಿನ್ನಲೆಯಲ್ಲಿ ಹೋರಾಟಗಾರರ ವೇದಿಕೆಯ ಮೇಲಿನಂತೆ ತೀರ್ಮಾ ನಿಸಲಾಗಿದೆ ಎಂದು ಅವರು ಹೇಳಿದರು.

ಮುಖ್ಯ ಕಾರ್ಯದರ್ಶಿ ನೀಡಿದ ವರದಿ ಮೇರೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇವರಿಗೆ ಕೇಂದ್ರ ಸರ್ಕಾರದ ಸಚಿವರು ಕರ್ನಾಟಕದಲ್ಲಿ ಅರ್ಜಿ ತಿರಸ್ಕರಿಸಿದ ಉತ್ತರದ ಪ್ರತಿಯನ್ನು ಚಿಂತನ ಕೂಟದಲ್ಲಿ ಪ್ರದರ್ಶೀಸುತ್ತಾ ಸುಪ್ರೀಂ ಕೊರ್ಟ ನಿರ್ಧೇಶನ ಉಲ್ಲಂಘಿನೆಯಾಗಿದ್ದಾರೆಂದು ಅವರು ಹೇಳಿದರು.

ಅರಣ್ಯ ಹಕ್ಕು ಕಾಯಿದೆ ಅರಣ್ಯವಾಸಿಗಳ ಪರವಾಗಿ ಇದ್ದಾಗಲೂ, ಭೂಮಿ ಹಕ್ಕಿನಿಂದ ವಂಚಿತರಗುವ ಸಂದರ್ಭದಲ್ಲಿ ಹೋರಾಟಗಾರರ ವೇದಿಕೆಯು ಸುಪ್ರೀಂಕೊರ್ಟನಲ್ಲಿ ಕಾನೂನು ಪ್ರಭಲ ಹೋರಾಟ ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅರಣ್ಯವಾಸಿಗಳಿಗೆ ಸಾಮಾಜಿಕ ಭದ್ದತೆ ಮತ್ತು ಕಾನೂನಾತ್ಮಕ ಸಭಲೀಕರಣಮಾಡುವ ಉದ್ದೇಶದಿಂದ ಮುಂದಿನ 60 ದಿನ ರಾಜ್ಯಾದ್ಯಂತ ಅರಣ್ಯವಾಸಿಗಳ ಜಾಗೃತ ಜಾಥಾ ಹಮ್ಮೀಕೋಳ್ಳುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಹೋರಾಟವು ೩೪ ವರ್ಷಕ್ಕೆ ಪಾದಾರ್ಪಣೆ ಸಂದರ್ಭದಲ್ಲಿ ಹೋರಾಟಗಾರರ ವೇದಿಕೆಯ ಕಾರ್ಯಾಲಯದಲ್ಲಿ ಇಂದು ``ಅರಣ್ಯವಾಸಿಗಳ ಜಾಗೃತ ಜಾಥದ - ಚಿಂತನ ಕೂಟ” ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮೇಲಿನಂತೆ ಹೇಳಿದರು.

ನಿರಂತರ ಅರಣ್ಯವಾಸಿಗಳು ಭೂಮಿ ಹಕ್ಕಿಗಾಗಿ ೩ ದಶಕದಿಂದ ಹೋರಾಟ ಸಂಘಟನೆ ಜರುಗಿದ್ದಾಗಲೂ ಮುಂದಿನ ವರ್ಷದಲ್ಲಿ ಸಾಂಘಿಕ ಮತ್ತು ಕಾನೂನಾತ್ಮಕ ಹೋರಾಟ ಸಂಘಟಿಸಲು ಸಭೆ ನಿರ್ಧರಿಸಿದೆ. ಅಲ್ಲದೇ, ಅರಣ್ಯ ಹಕ್ಕು ಕಾಯಿದೆ ಅರಣ್ಯವಾಸಿಗಳ ಪರವಾಗಿದ್ದಾಗಲೂ ಇಚ್ಚಾಸಕ್ತಿಯ ಕೊರತೆಯಿಂದ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ಚಿಂತನ ಕೂಟದಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಹಿರಿಯ ಹೋರಾಟಗಾರ್ತಿ ಗಂಗಾ ನಾಯ್ಕ ಅವರಿಗೆ ಗಿಡ ನೀಡುವ ಮೂಲಕ ಅರಣ್ಯವಾಸಿಗಳ ಜಾಗೃತ ಜಾಥಕ್ಕೆ ಚಾಲನೆ ನೀಡಲಾಯಿತು. ಸಭೆಯಲ್ಲಿ ಜಿಲ್ಲೆಯ ಅಧ್ಯಕ್ಷ ರಮನಂದ ನಾಯ್ಕ ಅಚವೆ, ರಾಘು ಕಂಚಚೂರು, ಇಬ್ರಾಹೀಂ ಗೌಡಳ್ಳಿ, ಭೀಮಸೀ ಯಲ್ಲಾಪುರ, ನಾಗಪತಿ ನಾಯ್ಕ ಸಿದ್ದಾಪುರ, ಸ್ವಾತಿ ಜೈನ್, ಜನಾರ್ಧನ್ ನಾಯ್ಕ, ಸುಬ್ರಾಯ್ ಸೀತಾರಾಮ ಹೆಗಡೆ, ದೇವೇಂದ್ರ ಬೆಡಸಗಾಂವ್, ಸತೀಶ್ ನಾಯ್ಕ, ಶಂಕರ್ ಕೋಡಿಯಾ ಮುಂತಾದವರು ಮಾತನಾಡಿದ್ದರು.

ನೆಹರು ನಾಯ್ಕ , ಎಮ್ ಆರ್ ನಾಯ್ಕ, ಮಹೇಂದ್ರ ನಾಯ್ಕ ಕತಗಾಲ್, ಮಾಬ್ರೇಶ್ವರ ನಾಯ್ಕ ಸಿದ್ದಾಪುರ, ಹರಿ ಹರ ನಾಯ್ಕ ನಿಲ್ಕುಂದ, ನಾಗಪತಿ ಗೌಡ, ಚಂದ್ರು ಪೂಜಾರಿ ಮಂಚಿಕೇರಿ, ದಿವಾಕರ ಮರಾಠಿ, ಸೀತಾರಾಮ ನಾಯ್ಕ ಕುಂದರಗಿ, ಗಣಪತಿ ನಾಯ್ಕ ಬೆಡಸಗಾಂವ್, ಅನಂತ ಸಿದ್ದಿ, ಬಸ್ತಾö್ಯಂವ್ ಡೀಸೋಜಾ, ಅನಂತ ಗೌಡ ಮಾವಿನಮನೆ, ಮುಂತಾದವರು ಉಪಸ್ಥೀತರಿದ್ದರು. ಕಾರ್ಯಕ್ರಮವನ್ನು ರಾಘವೇಂದ್ರ ಕವಂಚೂರು ನಿರ್ವಹಿಸಿದರು, ಮಾಬ್ಲೇಶ್ವರ ಬೇಡ್ಕಣಿ ವಂದಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X