ವಿಜಯನಗರ | ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ರಮಿಜಾಬಿ ನೇಮಕ

ವಿಜಯನಗರ: ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಿರುವ ಜಿಲ್ಲಾ ಮಟ್ಟದ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಹೊಸಪೇಟೆ ನಗರದ ಅಮರಾವತಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ ಸಹ ಶಿಕ್ಷಕಿ ರಮಿಜಾಬಿ ಪಿ. ಅವರನ್ನು ನೇಮಿಸಿದೆ.
ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳ ಮತ್ತು ಭಾಷನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಿಕೆವಂತೆ ಪ್ರೇರೇಪಿಸುವ ಹಿನ್ನೆಲೆಯಲ್ಲಿ 2020ರಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆದು, ಜಿಲ್ಲಾ ಮಟ್ಟದಲ್ಲಿ ಕನ್ನಡ ಜಾಗೃತಿ ಸಮಿತಿಯನ್ನು ಹೊಸದಾಗಿ ರಚಿಸಿದೆ.
ರಮಿಜಾಬಿ ಪಿ. ಸೇರಿದಂತೆ ಜಿಲ್ಲೆಯ ಒಟ್ಟು ಐವರನ್ನು ಸಮಿತಿಯ ಸದಸ್ಯರನ್ನಾಗಿಸಿ ನೇಮಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (ಆಡಳಿತ ಕನ್ನಡ) ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಆರ್. ರಮೇಶ್ ಅವರು ಸೆ.10 ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.
Next Story