ವಿಜಯನಗರ | ಸೆ.17 ರಿಂದ ಆ.2 ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್ ಅಭಿಯಾನ ಆರಂಭ : ಮುಹಮ್ಮದ್ ಅಲಿ ಅಕ್ರಮ್ ಶಾ

ವಿಜಯನಗರ (ಹೊಸಪೇಟೆ), ಸೆ.16: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೈರ್ಮಲ್ಯ ಹಾಗೂ ಶುಚಿತ್ವ ಕುರಿತು ಜಾಗೃತಿ ಮೂಡಿಸಲು ಸೆ.17ರಿಂದ ಅ.2ರವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಯಾ ಮುಹಮ್ಮದ್ ಅಲಿ ಅಕ್ರಮ್ ಶಾ ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕೇಂದ್ರ ಜಲಶಕ್ತಿ ಮಂತ್ರಾಲಯ ಹಾಗೂ ನಗರ ವಸತಿ ವ್ಯವಹಾರಗಳ ಸಚಿವಾಲಯದ ನೇತೃತ್ವದಲ್ಲಿ ಅಭಿಯಾನ ಜರುಗಲಿದೆ. ಇದರ ಉದ್ದೇಶ ಸಾರ್ವಜನಿಕರ ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯ ಸುಧಾರಣೆ ಮತ್ತು ಸಂಪೂರ್ಣ ನೈರ್ಮಲ್ಯ ಸಾಧಿಸುವುದಾಗಿದೆ ಎಂದರು.
ಅಭಿಯಾನದ ಅಂಗವಾಗಿ:
• ಸೆ.17ರಂದು ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯಕ್ರಮಗಳಿಗೆ ಚಾಲನೆ.
• ಕಸದ ರಾಶಿ ತೆರವು, ಐತಿಹಾಸಿಕ ಮತ್ತು ಧಾರ್ಮಿಕ ಸ್ಥಳಗಳ ಶುಚಿತ್ವಕ್ಕೆ ಶ್ರಮದಾನ.
• ಸ್ವಚ್ಛತಾ ಕಾರ್ಯಕರ್ತರ ಆರೋಗ್ಯ ಶಿಬಿರ, ಕಲ್ಯಾಣ ಯೋಜನೆಗಳ ಮಾಹಿತಿ.
• ತ್ಯಾಜ್ಯದಿಂದ ಕಲಾಕೃತಿ, ಸ್ವಚ್ಛ ಬೀದಿ–ಸ್ವಚ್ಛ ಆಹಾರ ಕುರಿತು ಜಾಗೃತಿ.
• “ಒಂದು ದಿನ–ಒಂದು ಗಂಟೆ–ಎಲ್ಲರೂ ಒಟ್ಟಿಗೆ” ಎಂಬ ಘೋಷವಾಕ್ಯದಡಿ ಶ್ರಮದಾನ. ಅಭಿಯಾನದಲ್ಲಿ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಸಿಇಒ ಕರೆ ನೀಡಿದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಸಹಾಯಕ ಯೋಜನಾಧಿಕಾರಿ ಎಂ.ಉಮೇಶ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸ್ವಚ್ಛ ಭಾರತ್ ಮಿಷನ್ ಸಿಬ್ಬಂದಿಗಳು ಹಾಜರಿದ್ದರು.