ವಿಜಯಪುರ | ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಹತ್ಯೆ

ಸಾಂದರ್ಭಿಕ ಚಿತ್ರ | PC : freepik
ವಿಜಯಪುರ : ಬೈಕ್ ಮೇಲೆ ತೆರಳುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಯುವಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ಬುಧವಾರ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ.
ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರದ ನಿವಾಸಿ ಅಜರುದ್ದೀನ್ ಅಬ್ದುಲ್ ರಜಾಲ್ ಮಕಾನದಾರ್ (38) ಹತ್ಯೆಯಾದ ಯುವಕ ಎಂದು ಗುರುತಿಸಲಾಗಿದೆ. ಅಜರುದ್ದೀನ್ ಬೈಕ್ ಮೇಲೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿಹತ್ಯೆ ಮಾಡಿದ್ದಾರೆ. ಸ್ಥಳದಲ್ಲಿಯೇ ಅಜರುದ್ದೀನ್ ಮೃತಪಟ್ಟಿದ್ದಾರೆ.
ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
Next Story