ವಿಜಯಪುರ | ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ : ಆಹಾರ ಇಲಾಖೆ ದಾಳಿ, ಅಕ್ಕಿ ವಶ

ವಿಜಯಪುರ : ವಿಜಯಪುರದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.
ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ 7,83,760 ಲಕ್ಷ ರೂ. ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ದಾಳಿಯಲ್ಲಿ ಆಹಾರ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಮದೇವ ಚವ್ಹಾಣ, ಆಹಾರ ಇಲಾಖೆಯ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ಆದರ್ಶನಗರ ಪಿಎಸ್‌ಐ ಪ್ರೇಮಾ ಕೂಚಬಾಳ ಹಾಗೂ ಎಎಸ್‌ಐ ವಿ.ಕೆ.ಪವಾರ ಹಾಗೂ ಆಹಾರ ಇಲಾಖೆ ಹಾಗೂ ಪೋಲಿಸ್ ಸಿಬ್ಬಂದಿಗಳು ಇದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಮಾಹಿತಿ ನೀಡಿದ್ದಾರೆ.
Next Story