Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆರ್ಥಿಕ ಇಲಾಖೆ ಸೂಚನೆ ನೀಡಿದ್ದರೂ ಪಿ ಡಿ...

ಆರ್ಥಿಕ ಇಲಾಖೆ ಸೂಚನೆ ನೀಡಿದ್ದರೂ ಪಿ ಡಿ ಖಾತೆಗೆ ಹಣ ವರ್ಗಾಯಿಸದ ಅಂಬೇಡ್ಕರ್ ಅಭಿವೃದ್ಧಿ ನಿಗಮ

ಜಿ.ಮಹಾಂತೇಶ್,ಜಿ.ಮಹಾಂತೇಶ್,5 Aug 2024 9:15 AM IST
share
ಆರ್ಥಿಕ ಇಲಾಖೆ ಸೂಚನೆ ನೀಡಿದ್ದರೂ ಪಿ ಡಿ ಖಾತೆಗೆ ಹಣ ವರ್ಗಾಯಿಸದ ಅಂಬೇಡ್ಕರ್ ಅಭಿವೃದ್ಧಿ ನಿಗಮ

ಬೆಂಗಳೂರು: ರಾಜ್ಯದ ವಿವಿಧ ಸಮುದಾಯ ಅಭಿವೃದ್ಧ್ದಿ ನಿಗಮಗಳ ಜಿಲ್ಲಾ ವಲಯದ ಬ್ಯಾಂಕ್ ಖಾತೆಯಲ್ಲಿನ ಮೊತ್ತವನ್ನು ಪಿ ಡಿ ಖಾತೆಗೆ ವರ್ಗಾಯಿಸಬೇಕು ಎಂದು ಆರ್ಥಿಕ ಇಲಾಖೆ ಸೂಚನೆ ನೀಡಿದ್ದರೂ ಡಾ ಅಂಬೇಡ್ಕರ್ ಅಭಿವೃದ್ಧ್ದಿ ನಿಗಮವು ಇನ್ನೂ ಪೂರ್ತಿ ಮೊತ್ತವನ್ನು ಪಿ ಡಿ ಖಾತೆ ವರ್ಗಾಯಿಸಿಲ್ಲ.

ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳು ಖಾಸಗಿ ಬ್ಯಾಂಕ್ಗಳಲ್ಲಿ ಠೇವಣಿ ರೂಪದಲ್ಲಿ ಇರಿಸಿದ್ದ ಹಣವನ್ನು ರಾಜ್ಯ ಹುಜೂರ್ ಖಜಾನೆಗೆ ವಾಪಸ್ ಮಾಡಬೇಕು ಎಂದು ಎಲ್ಲಾ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿತ್ತು. ಇದರ ಬೆನ್ನಲ್ಲೇ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಪಿಡಿ ಖಾತೆಗೆ ಪೂರ್ತಿ ಮೊತ್ತವನ್ನು ವರ್ಗಾಯಿಸಿಲ್ಲ ಎಂಬುದು ಮುನ್ನೆಲೆಗೆ ಬಂದಿದೆ.

ಪಿ ಡಿ ಖಾತೆಗಳಿಗೆ ಪೂರ್ತಿ ಮೊತ್ತವನ್ನು ವರ್ಗಾವಣೆ ಮಾಡದೇ ಇರುವ ನಿಗಮಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಸರಕಾರದ ಕಾರ್ಯದರ್ಶಿ

ಡಾ.ಎಂ.ಟಿ. ರೇಜು ಅವರು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿಗಳಿಗೆ 2024ರ ಜುಲೈ 26ರಂದು ಪತ್ರವನ್ನು ಬರೆದಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

‘ಎಲ್ಲಾ ನಿಗಮಗಳ ಜಿಲ್ಲಾ ವಲಯದ ಬ್ಯಾಂಕ್ ಖಾತೆಯಲ್ಲಿನ ಮೊತ್ತವನ್ನು ಪಿ ಡಿ ಖಾತೆಗೆ ವರ್ಗಾಯಿಸಿ, ಬ್ಯಾಂಕ್ ಖಾತೆಯನ್ನು ಕೂಡಲೇ ಮುಕ್ತಾಯಗೊಳಿಸುವಂತೆ ಸ್ಪಷ್ಟ ಸೂಚನೆ ನೀಡಲು ಹಾಗೂ ಇದರಂತೆ ಕ್ರಮವಹಿಸದ ವ್ಯವಸ್ಥಾಪಕ ನಿರ್ದೇಶಕರುಗಳನ್ನು ನೇರ ಹೊಣೆಗಾರರನ್ನಾಗಿ ಶಿಸ್ತು ಕ್ರಮ ಕೈಗೊಳ್ಳಲು ತಿಳಿಸಿದೆ. ಜಿಲ್ಲಾ ವಲಯದ ಬ್ಯಾಂಕ್ ಖಾತೆಯಲ್ಲಿನ ಮೊತ್ತವನ್ನು ಪಿ ಡಿ ಖಾತೆಗೆ ವರ್ಗಾಯಿಸುವ ಕುರಿತು ತೆಗೆದುಕೊಂಡ ಕ್ರಮದ ವರದಿಯನ್ನು ಕೂಡಲೇ ಆರ್ಥಿಕ ಇಲಾಖೆಗೆ ಸಲ್ಲಿಸಬೇಕು’ ಎಂದು ಡಾ. ರೇಜು ಅವರು ಪತ್ರದಲ್ಲಿ ಸೂಚಿಸಿರುವುದು ಗೊತ್ತಾಗಿದೆ.

ಬ್ಯಾಂಕ್ ಖಾತೆಯಲ್ಲಿನ ಮೊತ್ತವನ್ನು ಪಿ ಡಿ ಖಾತೆಗೆ ವರ್ಗಾಯಿಸಿ ಆರ್ಥಿಕ ವ್ಯವಹಾರವನ್ನು ಪಿ ಡಿ ಖಾತೆ ಮೂಲಕವೇ ಕೈಗೊಂಡು ಬ್ಯಾಂಕ್ ಖಾತೆಗಳನ್ನು ಮುಕ್ತಾಯಗೊಳಿಸಬೇಕು. ಈ ಬಗ್ಗೆ ನಿಗದಿತ ನಮೂನೆಯನ್ನು ಸಹ ನಿಗಮಗಳಿಗೆ ಕಳಿಸಿತ್ತು. ಆದರೆ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಪೂರ್ತಿ ಮೊತ್ತವನ್ನು ಪಿ ಡಿ ಖಾತೆಗೆ ವರ್ಗಾಯಿಸಿಲ್ಲ ಎಂಬುದು ಪತ್ರದಿಂದ ತಿಳಿದು ಬಂದಿದೆ. ‘ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿನ ಜಿಲ್ಲಾ ವಲಯದ ಎಲ್ಲಾ ಬ್ಯಾಂಕ್ ಖಾತೆಗಳ ಮೊತ್ತವನ್ನು ಪಿ ಡಿ ಖಾತೆಗೆ ವರ್ಗಾಯಿಸುವಂತೆ ತಿಳಿಸಲಾಗಿದ್ದು ಇನ್ನೂ ಪೂರ್ತಿ ಮೊತ್ತವನ್ನು ಪಿ ಡಿ ಖಾತೆಗೆ ವರ್ಗಾಯಿಸದಿರುವುದು ಕಂಡುಬಂದಿರುತ್ತದೆ’ ಎಂದು ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

ಈ ಕುರಿತು ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರೊಂದಿಗೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ನಿಗಮಗಳ ಹೆಸರಿನಲ್ಲಿ ಹೊಸದಾಗಿ ಠೇವಣಿ ಖಾತೆಗಳನ್ನು ತೆರೆಯುವ ಕುರಿತು 2023ರ ಎಪ್ರಿಲ್ 17ರಂದೇ ಆರ್ಥಿಕ ಇಲಾಖೆಯು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ಟಿಪ್ಪಣಿ ಹೊರಡಿಸಿತ್ತು. ಈ ಪತ್ರದ ಪ್ರತಿಯೂ ‘ದಿ ಫೈಲ್’ಗೆ ಲಭ್ಯವಾಗಿದೆ.

‘ಸರಕಾರದಿಂದ ನಿಗಮಗಳಿಗೆ ಬಿಡುಗಡೆ ಮಾಡಲಾಗುತ್ತಿರುವ ಅನುದಾನ ಬಹುತೇಕ ನಿಗಮಗಳಿಗೆ ಆಯಾ ಸಾಲಿನಲ್ಲಿಯೇ ಬಳಕೆಯಾಗುತ್ತಿಲ್ಲ. ಇದಕ್ಕೆ ಹಲವಾರು ಕಾರಣಗಳಿದ್ದು ಈ ಬಳಕೆಯಾಗದ ಅನುದಾನವನ್ನು ಆಯಾ ನಿಗಮದಲ್ಲಿ ಬ್ಯಾಂಕ್ ಖಾತೆಯಲ್ಲಿಟ್ಟು ಮುಂದಿನ ಸಾಲಿಗೆ ಬಳಕೆ ಮಾಡಿಕೊಳ್ಳುತ್ತಿವೆ. ಸರಕಾರದ ಅನುದಾನ ಕಾಲಮಿತಿಯಲ್ಲಿ ವೆಚ್ಚವಾಗದೇ ಅನಗತ್ಯವಾಗಿ ಬ್ಯಾಂಕ್ ಖಾತೆಯಲ್ಲಿ ಸಂಗ್ರಹಣೆಯಾಗುತ್ತಿದೆ. ಹೀಗಾಗಿ ಸರಕಾರದ ಇತರ ಯೋಜನೆಗಳಿಗೆ ಅನುದಾನ ಕೊರತೆಯಾಗಿರುತ್ತದೆ’ ಎಂದು 2023ರ ಎಪ್ರಿಲ್ 17ರಂದು ಬರೆದಿದ್ದ ಪತ್ರದಿಂದ ತಿಳಿದು ಬಂದಿದೆ.

share
ಜಿ.ಮಹಾಂತೇಶ್,
ಜಿ.ಮಹಾಂತೇಶ್,
Next Story
X