Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪ್ರಧಾನಮಂತ್ರಿ ಆವಾಸ್ (ಗ್ರಾಮೀಣ) ಯೋಜನೆ:...

ಪ್ರಧಾನಮಂತ್ರಿ ಆವಾಸ್ (ಗ್ರಾಮೀಣ) ಯೋಜನೆ: ಫಲಾನುಭವಿಗಳಿಗೆ ಅನುದಾನ ಬಿಡುಗಡೆ ವಿಳಂಬ ಒಪ್ಪಿಕೊಂಡ ಸರಕಾರ

ಜಿ. ಮಹಾಂತೇಶ್ಜಿ. ಮಹಾಂತೇಶ್11 July 2025 6:35 AM IST
share
ಪ್ರಧಾನಮಂತ್ರಿ ಆವಾಸ್ (ಗ್ರಾಮೀಣ) ಯೋಜನೆ: ಫಲಾನುಭವಿಗಳಿಗೆ ಅನುದಾನ ಬಿಡುಗಡೆ ವಿಳಂಬ ಒಪ್ಪಿಕೊಂಡ ಸರಕಾರ

ಬೆಂಗಳೂರು, ಜು.10: ಪ್ರಧಾನಮಂತ್ರಿ ಆವಾಸ್ (ಗ್ರಾಮೀಣ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗುವುದರಲ್ಲಿ ವಿಳಂಬವಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಸರಕಾರವು ಅಧಿಕೃತವಾಗಿ ಒಪ್ಪಿಕೊಂಡಿದೆ.

ಅಲ್ಲದೇ ಕೇಂದ್ರ ಸರಕಾರವು ಬಿಡುಗಡೆ ಮಾಡಿರುವ ಅನುದಾನವನ್ನೂ ಉಪಯೋಗಿ ಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಲ್ಲಿ ಆಗುತ್ತಿರುವ ವಿಳಂಬವೇ ಮೂಲ ಕಾರಣ ಎಂದು ಬೊಟ್ಟು ಮಾಡಿದೆ. ಅಲ್ಲದೇ ಇದರಿಂದ ಯೋಜನೆಯ ಮಾರ್ಗಸೂಚಿಗಳೂ ಉಲ್ಲಂಘನೆ ಆಗುತ್ತಿವೆ ಎಂದೂ ಹೇಳಿದೆ.

'ಗ್ಯಾರಂಟಿ ಯೋಜನೆಗಳಿಂದಾಗಿ ಚಾಲ್ತಿಯಲ್ಲಿರುವ ಹಲವು ಕಾರ್ಯಕ್ರಮಗಳು, ಯೋಜನೆಗಳಿಗೆ ಅನುದಾನ ಲಭ್ಯವಾಗುತ್ತಿಲ್ಲ ಎಂದು ಶಾಸಕರು ಇತ್ತೀಚೆಗಷ್ಟೇ ಕಾಂಗ್ರೆಸ್ ವರಿಷ್ಠರ ಮುಂದೆ ಗೋಳು ತೋಡಿಕೊಂಡಿದ್ದರು. ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರೂ ಸಹ ಗ್ಯಾರಂಟಿ ಬೇಡ ಎಂದರೆ ರಸ್ತೆ ಮಾಡಿಕೊಡುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗಳನ್ನು ರಾಜಕೀಯವಾಗಿ ಅಸ್ತ್ರವನ್ನಾಗಿ ಸಿಕೊಂಡಿರುವ ಪ್ರತಿಪಕ್ಷವು ಕಾಂಗ್ರೆಸ್ ಸರಕಾರವು ದಿವಾಳಿಯಾಗಿದೆ ಎಂದು ಪ್ರಚಾರ ಮಾಡುತ್ತಿದೆ. ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಈ ಎಲ್ಲ ಬೆಳವಣಿಗೆಗಳ ನಡುವೆಯೇ ಪ್ರಧಾನ ಫಲಾನುಭವಿಗಳ ಅನುದಾನ ಬಿಡುಗಡೆಯಲ್ಲಿ ಆಗಿರುವ ವಿಳಂಬ ಮತ್ತು ಇದರಿಂದಾಗಿರುವ ಪರಿಣಾಮಗಳ ಬಗ್ಗೆ ಖುದ್ದು ವಸತಿ ಇಲಾಖೆಯೇ ಬರೆದಿರುವ ಪತ್ರವು ಮುನ್ನೆಲೆಗೆ ಬಂದಿದೆ.

ಈ ಕುರಿತು ಸಚಿವ ಝಮೀರ್ ಅಹ್ಮದ್ ಖಾನ್ ಅವರೊಂದಿಗೆ ವಸತಿ ಇಲಾಖೆ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ

ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ವಿವಿಧ ವಸತಿ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆಗೆ ನೀಡಿದ್ದ ಗುರಿ ಮುಟ್ಟಿಲ್ಲ ಎಂದು 'the-file.in' ವರದಿಗಳನ್ನು ಪ್ರಕಟಿಸಿದ ಬೆನ್ನಲ್ಲೇ ವಸತಿ ಇಲಾಖೆಯ ಸರಕಾರದ ಕಾರ್ಯದರ್ಶಿ ವಿ.ಅನುಕುಮಾರ್ ಅವರು ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಪತ್ರ ಬರೆದಿದ್ದಾರೆ.

2025ರ ಜುಲೈ 5ರಂದು ಬರೆದಿರುವ ಅರೆ ಸರಕಾರಿ ಪತ್ರವು (ಅ.ಸ.ಪತ್ರ ಸಂಖ್ಯೆ; DOH 23 HAM 2025 DAT-ED 05.07.2025) 'the-file.in'ಗೆ ಲಭ್ಯವಾಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ ಅನುದಾನವನ್ನು ಮುಂಗಡವಾಗಿ ಬಿಡುಗಡೆ (ಗ್ರಾಮೀಣ)ಯ ಮೊದಲನೇ ಕಂತಿನ ಮಾಡುವ ಕುರಿತು ಅರೆ ಸರಕಾರಿ ಪತ್ರದಲ್ಲಿ ಪ್ರಸ್ತಾವಿಸಿದೆ. ಹಾಗೆಯೇ ಅನುದಾನ ಬಿಡುಗಡೆಯಲ್ಲಿ ಆಗಿರುವ ವಿಳಂಬ ಮತ್ತು ಕೇಂದ್ರದ ಅನುದಾನ ಬಳಕೆ ಆಗದಿರುವ ಕುರಿತೂ ಇದೇ ಅರೆ ಸರಕಾರಿ ಪತ್ರದಲ್ಲಿ ಪ್ರಸ್ತಾವವಾಗಿದೆ.

'ಫಲಾನುಭವಿಗಳ ಅನುದಾನ ಬಿಡುಗಡೆಯಲ್ಲಿ ವಿಳಂಬ ಆಗುತ್ತಿರುವುದರಿಂದ ಕೇಂದ್ರ ಸರಕಾರದಿಂದ ಬಿಡುಗಡೆ ಮಾಡಲಾದ ಅನುದಾನವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ಯೋಜನೆಯ ಮಾರ್ಗಸೂಚಿ ಉಲ್ಲಂಘನೆಯಾಗುತ್ತಿದೆ. ಇದಕ್ಕೆ ಅನುಷ್ಠಾನಾಧಿಕಾರಿಗಳೇ ನೇರ ಹೊಣೆಗಾರರಾಗಿ ರುತ್ತಾರೆ' ಎಂದು ವಸತಿ ಇಲಾಖೆಯು ಎಚ್ಚರಿಸಿರುವುದು ಪತ್ರದಿಂದ ತಿಳಿದು ಬಂದಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) 2024-25ನೇ ಸಾಲಿಗೆ ರಾಜ್ಯಕ್ಕೆ 7,02,731 ಮನೆಗಳ ಗುರಿಯನ್ನು ಮಂಜೂರು ಮಾಡಿತ್ತು. ಈ ಗುರಿಗೆ ಆದ್ಯತೆ ಮೇರೆಗೆ ಅಸ್ತಿತ್ವದಲ್ಲಿರುವ ಆವಾಸ್ ಪ್ಲಸ್ 2018ರ ಪಟ್ಟಿಯಿಂದ ಫಲಾನುಭವಿಗಳನ್ನು ಆಯ್ಕೆಗೊಳಿಸಿ ಅನುಷ್ಠಾನಗೊಳಿಸಲು ನಿರ್ದೇಶಿಸಿತ್ತು.

2025ರ ಜುಲೈ 5ರ ಅಂತ್ಯಕ್ಕೆ ಈ ಗುರಿಗೆ ಎದುರಾಗಿ 2,54,671 ಮನೆಗಳ ಗುರಿಗೆ ಮಂಜೂರಾತಿಗೆ ಆದೇಶ ನೀಡಿದೆ ಮತ್ತು ಈ ಪೈಕಿ 1,76,384 ಫಲಾನುಭವಿಗಳಿಗೆ ಮಾತ್ರ ಮೊದಲನೇ ಕಂತಿನ ಅನುದಾನ ಬಿಡುಗಡೆ ಮಾಡಿದೆ ಎಂಬ ವಿವರಗಳು ಈ ಅರೆ ಸರಕಾರಿ ಪತ್ರದಲ್ಲಿರುವುದು ಗೊತ್ತಾಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯ (ಗ್ರಾಮೀಣ) ಮಾರ್ಗಸೂಚಿಗಳ ಅನ್ವಯ ಯೋಜನೆಯಡಿ ಫಲಾನುಭವಿ ಆಯ್ಕೆಯಾದ 7 ದಿನದೊಳಗೆ ಪ್ರಥಮ ಕಂತಿನ ಸಹಾಯ ಧನವನ್ನು ಮುಂಗಡವಾಗಿ ನೀಡಬೇಕು. ಆದರೂ ನಿರೀಕ್ಷಿತ ಪ್ರಗತಿ ಸಾಧಿಸಿರಲಿಲ್ಲ. ಹೀಗಾಗಿ ಮತ್ತೊಮ್ಮೆ ಅರೆ ಸರಕಾರಿ ಪತ್ರ ಬರೆದಿರುವ ವಸತಿ ಇಲಾಖೆಯು ಫಲಾನುಭವಿಗಳಿಗೆ ತ್ವರಿತವಾಗಿ ಅನುದಾನ ಬಿಡುಗಡೆ ಮಾಡಲು ನಿರ್ದೇಶಿಸಿದೆ.

ಈ ಯೋಜನೆಯಡಿ ಮನೆ ಮಂಜೂರಾತಿಯಾದ ಕೂಡಲೇ ತಾಲೂಕು ಪಂಚಾಯತ್ ನಿಂದ ಫಲಾನುಭವಿಗಳ ಆರ್ಡರ್ ಶೀಟ್ ತಯಾರಿಸಲು ಕ್ರಮವಹಿಸಬೇಕು. ತಾಲೂಕು ಪಂಚಾಯತ್ 1st Signagory loginನಲ್ಲಿ FTO ತಯಾರಿಸಿ ಡಿಎಸ್ಪಿ ಕೀ ಮುಖಾಂತರ Ist Signagory ಮಾಡಬೇಕು. ಜಿಲ್ಲಾ ಪಂಚಾಯತ್‌ಗಳ ಮುಖ್ಯ ಲೆಕ್ಕಾಧಿಕಾರಿಗಳು ಡಿಎಸ್ಪಿ ಕೀ ಮುಖಾಂತರ 2nd Signagory ಮಾಡಬೇಕು ಎಂದು ನಿರ್ದೇಶಿಸಿರುವುದು ಗೊತ್ತಾಗಿದೆ.

'ಈ ಎಲ್ಲದರ ಕುರಿತು ವೈಯಕ್ತಿಕ ಗಮನಹರಿಸಿ ತಮ್ಮ ಜಿಲ್ಲೆಯಲ್ಲಿ ಮಂಜೂರಾತಿ ನೀಡಲಾದ ಫಲಾನುಭವಿಗಳಿಗೆ ಮೊದಲನೇ ಕಂತಿನ ಅನುದಾನ ಬಿಡುಗಡೆಗೊಳಿಸಲು ಕೂಡಲೇ ಕ್ರಮವಹಿಸಬೇಕು,' ಎಂದು ವಸತಿ ಇಲಾಖೆಯ ಸರಕಾರದ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಿರ್ದೇಶಿಸಿರುವುದು ತಿಳಿದು ಬಂದಿದೆ ಪ್ರಧಾನಮಂತ್ರಿ ಆವಾಸ್ ಮತ್ತು ವಿವಿಧ ವಸತಿ ಯೋಜನೆಗಳಡಿಯಲ್ಲಿ ನಗರ ಮತ್ತು ಗ್ರಾಮೀಣ ನಿವೇಶನ ಯೋಜನೆಯಡಿ ರಾಜ್ಯದ ಹಲವು ಜಿಲ್ಲೆಗಳು ನಿರೀಕ್ಷಿತ ಪ್ರಗತಿಯನ್ನು ಸಾಧಿಸಿಲ್ಲ. ವಿಶೇಷವಾಗಿ ಉಡುಪಿ ಮತ್ತು ಬೆಂಗಳೂರು ನಗರ ಜಿಲ್ಲೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಫಲಾನುಭವಿಗಳ ಆಯ್ಕೆಗೆ ನೀಡಿದ್ದ ಗುರಿಯನ್ನೇ ತಲುಪಿರಲಿಲ್ಲ. ರಾಜ್ಯದ 31 ಜಿಲ್ಲೆಗಳಲ್ಲಿ ಈ ಯೋಜನೆಯಡಿ ಒಟ್ಟಾರೆ ಶೇ.26ರಷ್ಟು ಮಾತ್ರ ಪ್ರಗತಿ ಸಾಧಿಸಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರ ತವರು ಮೈಸೂರು ಜಿಲ್ಲೆಯಲ್ಲಿಯಲ್ಲಿಯೇ ಶೇ. 28ರಷ್ಟು ಮಾತ್ರ ಪ್ರಗತಿ ಸಾಧಿಸಿದೆ. ವಸತಿ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಅವರ ತವರು ಕ್ಷೇತ್ರವನ್ನು ಹೊಂದಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೂನ್ಯ ಸಂಪಾದನೆ ಆಗಿದೆ ಅದೇ ರೀತಿ ಝಮೀರ್ ಅಹ್ಮದ್ ಖಾನ್ ಅವರು ಉಸ್ತುವಾರಿ ಹೊಂದಿರುವ ವಿಜಯನಗರ ಜಿಲ್ಲೆಯಲ್ಲಿ ಶೇ.58ರಷ್ಟು ಪ್ರಗತಿ ಸಾಧಿಸಿತ್ತು.

ವಸತಿ ಇಲಾಖೆಯಡಿಯಲ್ಲಿನ ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಅಳಂದ ಶಾಸಕ ಬಿ.ಆರ್.ಪಾಟೀಲ್ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಶೇ.34ರಷ್ಟು ಮಾತ್ರ ಪ್ರಗತಿ ಸಾಧಿಸಿತ್ತು.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X