Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಶ್ವವಿದ್ಯಾನಿಲಯಗಳ ಹೊಸ ಹುದ್ದೆಗಳ...

ವಿಶ್ವವಿದ್ಯಾನಿಲಯಗಳ ಹೊಸ ಹುದ್ದೆಗಳ ಪ್ರಸ್ತಾವ ತಿರಸ್ಕರಿಸುತ್ತಿರುವ ಸರಕಾರ

ಬಿಜೆಪಿ ಸರಕಾರದ ಅವಧಿಯಲ್ಲೂ ತಿರಸ್ಕರಿಸಲ್ಪಟ್ಟಿತ್ತು

ಜಿ.ಮಹಾಂತೇಶ್,ಜಿ.ಮಹಾಂತೇಶ್,4 Sept 2023 1:04 PM IST
share
ವಿಶ್ವವಿದ್ಯಾನಿಲಯಗಳ ಹೊಸ ಹುದ್ದೆಗಳ ಪ್ರಸ್ತಾವ ತಿರಸ್ಕರಿಸುತ್ತಿರುವ ಸರಕಾರ

ಬೆಂಗಳೂರು: ವಿಶ್ವವಿದ್ಯಾನಿಲಯಗಳು ಹೊಸ ಹುದ್ದೆಗಳ ಸೃಜಿಸುವ ಸಂಬಂಧ ಸಲ್ಲಿಸುತ್ತಿರುವ ಪ್ರಸ್ತಾವನೆಗಳನ್ನು ಆರ್ಥಿಕ ನಿರ್ಬಂಧಗಳ ಕಾರಣವನ್ನು ಮುಂದಿಟ್ಟು ಸರಕಾರವು ತಿರಸ್ಕರಿಸುತ್ತಿರುವುದು ಇದೀಗ ಬಹಿರಂಗವಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯವು ಸ್ನಾತಕೋತ್ತರ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗಕ್ಕೆ ಹೆಚ್ಚುವರಿ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಸೃಜಿಸುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗಳನ್ನು ಹಿಂದಿನ ಬಿಜೆಪಿ ಸರಕಾರ ಮತ್ತು ಹಾಲಿ ಕಾಂಗ್ರೆಸ್ ಸರಕಾರದಲ್ಲಿಯೂ ತಿರಸ್ಕೃತಗೊಳ್ಳುತ್ತಿವೆ. ಈ ಸಂಬಂಧ ‘ದಿ ಫೈಲ್’ಗೆ ಕಡತದ (ED/6/UDS/2021-ED -COMPUTER NUMBER 492755) ಟಿಪ್ಪಣಿ ಹಾಳೆಗಳು ಲಭ್ಯವಾಗಿವೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ ಭಾರತ ಜ್ಞಾನ ಅಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗಕ್ಕೆ ಹೆಚ್ಚುವರಿಯಾಗಿ ಬೋಧಕ, ಬೋಧಕೇತರ ಹುದ್ದೆಗಳ ಸೃಜನೆಗೆ ಪ್ರಸ್ತಾವನೆ ಸಲ್ಲಿಸಿತ್ತು. ಇದರಲ್ಲಿಯೇ ಅರೋಗ್ಯ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರಗೊಳಿಸಿ ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ ಮತ್ತಿತರ ಮೂಲ ಜ್ಞಾನವನ್ನೂ ನಿರೂಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯೋಗ ವಿಜ್ಞಾನ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

ಇಬ್ಬರು ಅಸೋಸಿಯೇಟ್ ಪ್ರೊಫೆಸರ್, ಲ್ಯಾಬ್ ಅಸಿಸ್ಟೆಂಟ್, ಟೈಪಿಸ್ಟ್, ಅಟೆಂಡರ್ ಹುದ್ದೆಯನ್ನು ಹೆಚ್ಚುವರಿಯಾಗಿ ಮಂಜೂರು ಮಾಡಲು ಅನುಮತಿ ಕೋರಿತ್ತು. ಈ ಪ್ರಸ್ತಾವನೆಯನ್ನು 2020ರಿಂದಲೂ ಪರಿಶೀಲಿಸುತ್ತಿರುವ ಆರ್ಥಿಕ ಇಲಾಖೆಯು 2023ರಲ್ಲಿಯೂ ಆರ್ಥಿಕ ನಿರ್ಬಂಧಗಳನ್ನು ಮುಂದೊಡ್ಡಿ ಸಹಮತಿ ವ್ಯಕ್ತಪಡಿಸಿಲ್ಲ.

2020ರಲ್ಲಿ ವಿನಾಯಿತಿ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಗಳ ಪೈಕಿ ಕೆಲವು ಪ್ರಸ್ತಾವನೆಗಳಿಗೆ ಮುಂದಿನ ಆರ್ಥಿಕ ವರ್ಷ ಎಂದರೆ 2021-22ನೇ ಸಾಲಿನಲ್ಲಿ 2021ರ ಎಪ್ರಿಲ್ 1ರ ನಂತರ ನೇಮಕಾತಿ ಆದೇಶಗಳನ್ನು ನೀಡಲು ಚಿಂತಿಸಿತ್ತು. ಆರ್ಥಿಕ ಇಲಾಖೆಯಿಂದ ಸಹಮತಿ ಪಡೆದಿದ್ದ ಪ್ರಸ್ತಾವನೆಗಳನ್ನೂ ಮತ್ತೊಮ್ಮೆ ಪರಿಶೀಲನೆಗೆ ಸಲ್ಲಿಸಬೇಕು ಎಂದೂ ಆರ್ಥಿಕ ಇಲಾಖೆಯು ಹೇಳಿತ್ತು. ಆರ್ಥಿಕ ಇಲಾಖೆಯು ಸಹಮತಿ ಪಡೆದೇ ನೇಮಕಾತಿ ಆದೇಶ ನೀಡಬೇಕು ಎಂದು 2021ರ ಮಾರ್ಚ್ ೩೦ರಂದು ಸೂಚಿಸಿತ್ತು ಎಂಬುದು ತಿಳಿದು ಬಂದಿದೆ.

ಆದರೆ ಸಂಪೂರ್ಣವಾಗಿ ತಿರಸ್ಕರಿಸಲಾದ ಪ್ರಸ್ತಾವನೆಗಳಿಗೆ ಈ ಸುತ್ತೋಲೆಯು ಅನ್ವಯಿಸುವುದಿಲ್ಲ ಎಂದೂ ಹೇಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮೇಲಿನ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಇದನ್ನು ಮರು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಪ್ರಸಕ್ತ ಇರುವ ಆರ್ಥಿಕ ನಿರ್ಬಂಧಗಳ ಹಿನ್ನೆಲೆಯಲ್ಲಿ ಹೊಸ ಹುದ್ದೆಗಳನ್ನು ಸೃಜಿಸಲು ಪ್ರಸ್ತಾವನೆಯನ್ನು ಒಪ್ಪಲು ಬರುವುದಿಲ್ಲ ಎಂದು ತನ್ನ ಅಭಿಪ್ರಾಯದಲ್ಲಿ ತಿಳಿಸಿತ್ತು. ಇದೇ ಅಭಿಪ್ರಾಯವನ್ನು ಮಂಗಳೂರು ವಿಶ್ವವಿದ್ಯಾನಿಲಯಕ್ಕೂ ತಿಳಿಸಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ. ಆದರೂ ಮಂಗಳೂರು ವಿಶ್ವವಿದ್ಯಾನಿಲಯವು ಯೋಗ ಅಧ್ಯಯನ ಮತ್ತು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಯೋಗ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ನೀಡುವ ದೇಶದ ಮೊದಲ ವಿಶ್ವವಿದ್ಯಾನಿಲಯವಾಗಿದೆ ಹಾಗೂ ಸರಕಾರವು ಶಾಲಾ ಕಾಲೇಜುಗಳಲ್ಲಿ ಯೋಗ ಶಿಕ್ಷಣವನ್ನು ಏರ್ಪಡಿಸುತ್ತಿರುವುದರಿಂದ ಯೋಗವನ್ನು ವಿಶೇಷವಾಗಿ ಪರಿಗಣಿಸಿ ಸ್ನಾತಕೋತ್ತರ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗಕ್ಕೆ ಹೆಚ್ಚುವರಿ ಮತ್ತು ಬೋಧಕ, ಬೋಧಕೇತರ ಹುದ್ದೆಗಳನ್ನು ಸೃಜಿಸಲು ಮರು ಪ್ರಸ್ತಾವನೆ ಸಲ್ಲಿಸಿತ್ತು. ಹೊಸದಾಗಿ ಸಲ್ಲಿಕೆಯಾಗಿರುವ ಪ್ರಸ್ತಾವನೆ ಸಂಬಂಧ ಪುನಃ ಆರ್ಥಿಕ ಇಲಾಖೆಯ ಅಭಿಪ್ರಾಯ ಪಡೆಯಲು ಉನ್ನತ ಶಿಕ್ಷಣ ಇಲಾಖೆಯು ಕಡತ ರವಾನಿಸಿದೆ ಎಂದು ಗೊತ್ತಾಗಿದೆ.

share
ಜಿ.ಮಹಾಂತೇಶ್,
ಜಿ.ಮಹಾಂತೇಶ್,
Next Story
X