ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾಕೂಟಗಳು ಸಹಕಾರಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಕ್ರೀಡಾಕೂಟಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿವೆ ಎಂದು ನಗರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಕಲಬುರಗಿ ವಿಭಾಗ ಮಟ್ಟದ ಸಿಎಂ ಕಪ್ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸೋಲು ಗೆಲುವು ಬಗ್ಗೆ ಯೋಚಿಸದೇ ಉತ್ಸಾಹದಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಸೋಲನ್ನು ಸವಾಲಾಗಿ ಸ್ವೀಕರಿಸಿ, ಎದೆಗುಂದದೇ ಆಸಕ್ತಿಯಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಲಲಿತಾ ಅನಪುರ್,ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹಣುಮಂತ ಹೊಸಮನಿ, ತಾಲೂಕು ಅಧ್ಯಕ್ಷ ಮೌನೇಶ್ ಉಪಸ್ಥಿತರಿದ್ದರು.
ಯುವ ಜನಸೇವಾ ಹಾಗೂ ಕ್ರೀಡಾ ಅಧಿಕಾರಿ ರಾಜು ಬಾವಿ ಹಳ್ಳಿ ಸ್ವಾಗತಿಸಿದರು.ತುಳಜಪ್ಪ ಶಹಾಪುರಕರ್, ಕಾರ್ಯಕ್ರಮ ನಿರೂಪಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು. ಕಲಬುರಗಿ ವಿಭಾಗದ ಏಳು ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಿದ್ದರು.
ಖೊಖೊ, ಥ್ರೋಬಾಲ್, ಭಾರ ಎತ್ತುವ ಕ್ರೀಡೆಗಳು ನಡೆದವು. ಆರಂಭಿಕವಾಗಿ ಶಾಸಕರು ಯಾದಗಿರಿ -ಬಳ್ಳಾರಿ ಹೆಣ್ಣು ಮಕ್ಕಳ ಪಂದ್ಯಾವಳಿಯನ್ನು ಉದ್ಘಾಟಿಸಿದರು. ಕ್ರೀಡಾಪಟು ನಾಯಕ ಅವರು ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.