ಸುರಪುರ | ಗರುಡಾದ್ರಿ ಕಲಾ ಮಂದಿರದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ

ಸುರಪುರ: ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 138ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಪಂಚಾಯತ್ ಯಾದಗಿರಿ, ತಾಲೂಕ ಪಂಚಾಯತ್ ಸುರಪುರ/ಹುಣಸಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸುರಪುರ ಮತ್ತು ವಿವಿಧ ಶಿಕ್ಷಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸರ್ವೋಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿ, ಒಂದು ಕಟ್ಟಡಕ್ಕೆ ಬುನಾದಿ ಭದ್ರವಾಗಿದ್ದರೆ ಕಟ್ಟಡ ಸದೃಢವಾಗುತ್ತದೆ. ಅದರಂತೆ ಶಿಕ್ಷಕರು ಮಕ್ಕಳಿಗೆ ಗಟ್ಟಿ ಬುನಾದಿಯಂತಹ ಶಿಕ್ಷಣ ನೀಡಿ ಭದ್ರ ಬುನಾದಿ ಹಾಕಬೇಕು ಎಂದರು.
ಡಿಡಿಪಿಐ ಚನ್ನಬಸಪ್ಪ ಮುಧೋಳ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ನಗರಸಭೆ ಅಧ್ಯಕ್ಷೆ ಹೀನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡನಾಯಕ (ತಾತಾ), ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ ಗುತ್ತೇದಾರ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್,ಮಲ್ಲಣ್ಣ ಸಾಹುಕಾರ ನರಸಿಂಗಪೇಟ, ಮಲ್ಲಣ್ಣ ದೊಡ್ಮನಿ, ಖಾದರ ಪಟೇಲ್, ಅಮರೇಶ ಮಾಲಗತ್ತಿ,ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣ ಕಲಬುರಗಿ, ಯಂಕಣ್ಣಗೌಡ ಅರಕೇರಿ,ಗೋವಿಂದಪ್ಪ ತನಿಕೇದಾರ, ಗೋಪಾಲ ನಾಯಕ ಜಾಹಾಗಿರದಾರ,ಕೃಷ್ಣ ದರಬಾರಿ,ಅಪ್ಪಣ್ಣ ಕುಲಕರ್ಣಿ, ಯುನುಸ್ ಬೇಪಾರಿ, ಕೊಟ್ರೇಶ ಕೊಳೂರ,ಶರಣಪ್ಪ ಪಾಕರೆಡ್ಡಿ,ಚುನ್ನು ಪಟೇಲ್ ಉಪಸ್ಥಿತರಿದ್ದರು.
ಪಂಡಿತ ನಿಂಬೂರೆ ಸ್ವಾಗತಿಸಿದರು, ರಾಜಶೇಖರ ದೇಸಾಯಿ, ಶಿವಲೀಲಾ ಮುರಾಳ ನಿರೂಪಿಸಿದರು, ಶರಣಸಬವ ಗೋನಾಲ ವಂದಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.